ಮಲ್ಲಿಕಾರ್ಜುನ ಖರ್ಗೆ ಕ್ಷಮೆಯಾಚನೆಗೆ ಆರ್. ಅಶೋಕ್ ಆಗ್ರಹ: ಕೀಳುಮಟ್ಟದ ರಾಜಕಾರಣದಿಂದ ಕಾಂಗ್ರೆಸ್ ಸರ್ವನಾಶ

1 min read · Updated 13 views
WhatsApp

​ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನೀಡಿರುವ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿ, ಅವರ ತಕ್ಷಣದ ಕ್ಷಮೆಯಾಚನೆಗೆ ಆಗ್ರಹಿಸಿ ಬಿಜೆಪಿ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಬೃಹತ್ ಪ್ರತಿಭಟನೆ ನಡೆಸಿತು.

​ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್, "ದೇಶ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸರ್ವನಾಶವಾಗಲು ಅಪ್ಪ ಮಲ್ಲಿಕಾರ್ಜುನ ಖರ್ಗೆ ಮತ್ತು ಮಗ ಪ್ರಿಯಾಂಕ್ ಖರ್ಗೆ ಅವರೇ ಸಾಕು," ಎಂದು ತೀವ್ರ ವ್ಯಂಗ್ಯವಾಡಿದರು. ಖರ್ಗೆ ಅವರ ಹೇಳಿಕೆಯು ಕಾಂಗ್ರೆಸ್ ಪಕ್ಷದ ಹೀನ ಸಂಸ್ಕೃತಿಯನ್ನು ಎತ್ತಿಹಿಡಿಯುತ್ತದೆ ಹಾಗೂ ಪಕ್ಷವು ದೇಶದ ಮುಂದೆ ಬೆತ್ತಲಾಗಿದೆ ಎಂದು ಟೀಕಿಸಿದರು.

​ಮಲ್ಲಿಕಾರ್ಜುನ ಖರ್ಗೆ ಅವರು ರಾಜಕೀಯ ಲಾಭಕ್ಕಾಗಿ ಕೀಳುಮಟ್ಟದ ಹೇಳಿಕೆಗಳನ್ನು ನೀಡುತ್ತಾ ಮಾನಸಿಕ ಸ್ಥಿಮಿತ ಕಳೆದುಕೊಂಡಂತೆ ವರ್ತಿಸುತ್ತಿದ್ದಾರೆ. ನಡೆಯಲಾಗದ ಸ್ಥಿತಿಯಲ್ಲಿರುವ ಕಾಂಗ್ರೆಸ್ ಪಕ್ಷಕ್ಕೆ ಭವಿಷ್ಯವಿಲ್ಲದಂತಾಗಿದೆ ಎಂದ ಅವರು, ಖರ್ಗೆ ಅವರು ದೇಶದ ಜನತೆಯ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.

​ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಭಾಗವಹಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Advertisement
AdSense · in-feed

Related