ಬಿಡದಿ ರೈತರ ಹೋರಾಟಕ್ಕೆ ಬಿಜೆಪಿ ಬೆಂಬಲ ನೀಡುವ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ , ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

1 min read · Updated 10 views
WhatsApp
ಬಿಡದಿ ರೈತರ ಹೋರಾಟಕ್ಕೆ ಬಿಜೆಪಿ ಬೆಂಬಲ ನೀಡುವ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ , ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

ಬೆಂಗಳೂರು ಆ 11:. ಬಿಡದಿ ರೈತರ ಹೋರಾಟಕ್ಕೆ ಬಿಜೆಪಿ ಬೆಂಬಲ ನೀಡುವ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಸ್ಪಷ್ಟಪಡಿಸಿದರು.

“ರೈತರ ಪರವಾಗಿ ಬಿಜೆಪಿ ಯಾವತ್ತೂ ಇರುತ್ತದೆ. ಬಿಡದಿ ಪಾದಯಾತ್ರೆಯನ್ನು ನಾವು ಮೊದಲೇ ಘೋಷಣೆ ಮಾಡಿದ್ದೆವು. ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಿ ದಿನಾಂಕ ನಿಗದಿ ಮಾಡಬೇಕು ಎಂದುಕೊಂಡಿದ್ದೆವು. ಆದರೆ ಅಷ್ಟರಲ್ಲಿ ಚನ್ನಮ್ಮ ದೇವೇಗೌಡರು ನಿಧನರಾದರು. ಅವರ ಅಂತ್ಯಕ್ರಿಯೆ ಹಾಗೂ ಕಾರ್ಯಗಳು ಮುಗಿದ ನಂತರ ಪಾದಯಾತ್ರೆ ನಡೆಸೋಣ ಎಂದು ನಾನೇ ಕುಮಾರಸ್ವಾಮಿ ಅವರಿಗೆ ವೈಯಕ್ತಿಕವಾಗಿ ತಿಳಿಸಿದ್ದೆ” ಎಂದು ಅವರು ವಿವರಿಸಿದರು.

ಆದರೆ ಕಾರ್ಯಗಳು ಮುಗಿದ ಬಳಿಕ ನಿಖಿಲ್ ಕುಮಾರಸ್ವಾಮಿ ಅವರು ಪಾದಯಾತ್ರೆಯ ದಿನಾಂಕವನ್ನು ಘೋಷಿಸಿದರು. ನಂತರ ಬಿಜೆಪಿ ಕೋರ್ ಕಮಿಟಿಯಲ್ಲಿ ಈ ಕುರಿತು ಚರ್ಚಿಸಿ, ಪಾದಯಾತ್ರೆಗೆ ಸಾಂಕೇತಿಕ ಬೆಂಬಲ ನೀಡಲು ನಿರ್ಧರಿಸಲಾಯಿತು. ಅದರಂತೆ ಪಾದಯಾತ್ರೆ ಉದ್ಘಾಟನೆಯ ದಿನ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಭಾಗವಹಿಸಿ ಸಾಂಕೇತಿಕವಾಗಿ ಬೆಂಬಲ ಸೂಚಿಸಿ ಬಂದಿದ್ದಾರೆ ಎಂದು ವಿಜಯೇಂದ್ರ ತಿಳಿಸಿದರು.

ಅಂದು ಪೂರ್ವನಿರ್ಧರಿತ ಪ್ರವಾಸ ಕಾರ್ಯಕ್ರಮವಿದ್ದ ಕಾರಣ ತಾವು ಪಾದಯಾತ್ರೆಯಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಮಧು ಬಂಗಾರಪ್ಪ ಅವರೊಂದಿಗೆ ಯಾವುದೇ ಉಲ್ಟಾ-ಸೀದಾ ಮಾತುಕತೆ ನಡೆದಿಲ್ಲ

ಮಧು ಬಂಗಾರಪ್ಪ ಅವರೊಂದಿಗೆ ತಾನು ಮಾತನಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೆಲವು ಕಡೆ ತಪ್ಪು ಅಭಿಪ್ರಾಯ ಮೂಡಿಸುವ ಪ್ರಯತ್ನ ನಡೆಯುತ್ತಿದೆ ಎಂದು ವಿಜಯೇಂದ್ರ ಹೇಳಿದರು.

“ಮಧು ಬಂಗಾರಪ್ಪ ಅವರೊಂದಿಗೆ ನಾನು ಯಾವುದೇ ಉಲ್ಟಾ-ಸೀದಾ ಮಾತುಗಳನ್ನು ಆಡಿಲ್ಲ. ನೇರವಾಗಿಯೇ ಮಾತನಾಡಿದ್ದೇನೆ. ಜೆಡಿಎಸ್ ಪಾದಯಾತ್ರೆಗೆ ಬಿಜೆಪಿ ಸಾಂಕೇತಿಕ ಬೆಂಬಲ ನೀಡಿರುವುದನ್ನೂ ಸ್ಪಷ್ಟವಾಗಿ ತಿಳಿಸಿದ್ದೇನೆ. ನಮ್ಮ ಹೋರಾಟಕ್ಕೂ ಮುನ್ನ ಕೆಲವು ರೈತರು ಪರಿಹಾರ ಪಡೆದು ಹಿಂದಕ್ಕೆ ಸರಿದಿರುವ ವಿಚಾರವನ್ನೂ ಹೇಳಿದ್ದೇನೆ” ಎಂದು ಅವರು ಸ್ಪಷ್ಟಪಡಿಸಿದರು.

ಜೆಡಿಎಸ್ ನೇತೃತ್ವದ ಪಾದಯಾತ್ರೆಗೆ ಬಿಜೆಪಿ ಸಾಂಕೇತಿಕವಾಗಿ ಬೆಂಬಲ ನೀಡಿದೆ. ಆದರೆ ಇದನ್ನು ಬಿಡದಿ ರೈತರ ಹೋರಾಟಕ್ಕೆ ಬಿಜೆಪಿ ಕೇವಲ ಸಾಂಕೇತಿಕ ಬೆಂಬಲ ನೀಡಿದೆ ಎಂಬ ಅರ್ಥದಲ್ಲಿ ವ್ಯಾಖ್ಯಾನಿಸಬಾರದು ಎಂದು ಅವರು ತಿಳಿಸಿದರು.

ಬಿಡದಿ ವಿಚಾರದಲ್ಲಿ ಮುಖ್ಯಮಂತ್ರಿಗಳ ದ್ವಂದ್ವ ನಿಲುವು

ಬಿಡದಿ ರೈತರ ಜಮೀನುಗಳ ವಿಚಾರದಲ್ಲಿ ಮುಖ್ಯಮಂತ್ರಿ ಅವರು ದ್ವಂದ್ವ ನಿಲುವು ಪ್ರದರ್ಶಿಸುತ್ತಿದ್ದಾರೆ ಎಂದು ವಿಜಯೇಂದ್ರ ಆರೋಪಿಸಿದರು.

ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆದ ಪಾದಯಾತ್ರೆಗೆ ಬಿಜೆಪಿ ಬೆಂಬಲ ನೀಡುವ ವಿಚಾರದಲ್ಲಿ ಪಕ್ಷದೊಳಗೆ ಯಾವುದೇ ಗೊಂದಲವಿಲ್ಲ. ರೈತರ ಹಿತಾಸಕ್ತಿ ಕಾಪಾಡುವ ವಿಚಾರದಲ್ಲಿ ಬಿಜೆಪಿ ತನ್ನ ನಿಲುವಿಗೆ ಬದ್ಧವಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

“ನಾನು ಈ ಹಿಂದೆ ನೀಡಿರುವ ಹೇಳಿಕೆಗೆ ಬದ್ಧನಾಗಿದ್ದೇನೆ. ಮಧು ಬಂಗಾರಪ್ಪ ಅವರೊಂದಿಗೆ ನಡೆದ ಮಾತುಕತೆಯ ವಿಚಾರದಲ್ಲಿ ತಪ್ಪು ಅಭಿಪ್ರಾಯ ಮೂಡಿಸುವ ಕೆಲಸ ನಡೆಯುತ್ತಿದೆ. ಬಿಜೆಪಿ ಸದಾ ರೈತರ ಪರವಾಗಿ ನಿಲ್ಲುತ್ತದೆ. ರೈತರ ಜಮೀನು ಮತ್ತು ಹಕ್ಕುಗಳ ರಕ್ಷಣೆಯ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ” ಎಂದು ಬಿ.ವೈ. ವಿಜಯೇಂದ್ರ ಅವರು ಹೇಳಿದರು. ಮತ್ತು ಹಕ್ಕುಗಳ ರಕ್ಷಣೆಯ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ” ಎಂದು ಬಿ.ವೈ. ವಿಜಯೇಂದ್ರ ಅವರು ಹೇಳಿದರು.*

Advertisement
AdSense · in-feed

Related