ರಿಂಗ್ ರೋಡ್ ಶುಭಾ ಕ್ಷಮಾದಾನ ಅರ್ಜಿ ತಿರಸ್ಕರಿಸುವಂತೆ ಶಿಫಾರಸು ಮಾಡಿದ ಸಚಿವ ಸಂಪುಟ

1 मिनट में पढ़ें · अपडेट किया गया 12 व्यूज़
WhatsApp
ರಿಂಗ್ ರೋಡ್ ಶುಭಾ ಕ್ಷಮಾದಾನ ಅರ್ಜಿ ತಿರಸ್ಕರಿಸುವಂತೆ ಶಿಫಾರಸು ಮಾಡಿದ ಸಚಿವ ಸಂಪುಟ

ಬೆಂಗಳೂರು: ರಿಂಗ್ ರೋಡ್ ಶುಭಾ ಶಂಕರ್ ಮತ್ತು ಡಿ. ಅರುಣ್ ವರ್ಮಾ ಸಲ್ಲಿಸಿರುವ ಕ್ಷಮಾದಾನ ಮನವಿಯನ್ನು ತಿರಸ್ಕರಿಸುವಂತೆ ರಾಜ್ಯಪಾಲರಿಗೆ ಶಿಫಾರಸು ಮಾಡಬೇಕೆಂದು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ ಎಂಬುದಾಗಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಬೆಂಗಳೂರಿನ 17ನೇ ತ್ವರಿತ ವಿಚಾರಣಾ ನ್ಯಾಯಾಲಯದಲ್ಲಿ ದಾಖಲಾಗಿದ್ದ ಎಸ್‌ಸಿ ಸಂಖ್ಯೆ 314/2004ರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸಂಪುಟ ಹೀಗೆ ನಿರ್ಧಾರ ಮಾಡಿದೆ.

2025ರ ಜುಲೈ 14ರಂದು ಸುಪ್ರೀಂ ಕೋರ್ಟ್ ನೀಡಿದ್ದ ಆದೇಶದಂತೆ, ಅರ್ಜಿದಾರರು ಸಂವಿಧಾನದ 161ನೇ ವಿಧಿಯಡಿ ರಾಜ್ಯಪಾಲರಿಗೆ ಕ್ಷಮಾದಾನ ಅರ್ಜಿ ಸಲ್ಲಿಸಲು ಎಂಟು ವಾರಗಳ ಕಾಲಾವಕಾಶ ನೀಡಲಾಗಿತ್ತು. ಅರ್ಜಿಗಳ ಕುರಿತು ನಿರ್ಧಾರ ಕೈಗೊಳ್ಳುವವರೆಗೆ ಅರ್ಜಿದಾರರನ್ನು ಬಂಧಿಸಬಾರದು ಮತ್ತು ಶಿಕ್ಷೆಯನ್ನು ಅಮಾನತಿನಲ್ಲಿಡಬೇಕು ಎಂದು ನ್ಯಾಯಾಲಯ ನಿರ್ದೇಶಿಸಿತ್ತು.

ಆದ್ದರಿಂದ ಈ ಮನವಿಯನ್ನು ತಿರಸ್ಕರಿಸುವಂತೆ ರಾಜ್ಯಪಾಲರಿಗೆ ಶಿಫಾರಸು ಮಾಡಲು ಸಚಿವ ಸಂಪುಟ ತೀರ್ಮಾನಿಸಿದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದರು

विज्ञापन
AdSense · in-feed

संबंधित लेख