ಎರಡು ವರ್ಷಗಳೊಳಗೆ ಮೇಕೆದಾಟು ಯೋಜನೆಯನ್ನು ಪೂರ್ಣಗೊಳಿಸಿ: ಮುಖ್ಯಮಂತ್ರಿ ಚಂದ್ರು ಬಹಿರಂಗ ಪತ್ರ

1 मिनट में पढ़ें · अपडेट किया गया 10 व्यूज़
WhatsApp
ಎರಡು ವರ್ಷಗಳೊಳಗೆ ಮೇಕೆದಾಟು ಯೋಜನೆಯನ್ನು ಪೂರ್ಣಗೊಳಿಸಿ: ಮುಖ್ಯಮಂತ್ರಿ ಚಂದ್ರು ಬಹಿರಂಗ ಪತ್ರ

ಬೆಂಗಳೂರು, ಜುಲೈ 28: ಮೇಕೆದಾಟು ಸಮತೋಲನ ಜಲಾಶಯ ಯೋಜನೆಯನ್ನು ತಕ್ಷಣ ಆರಂಭಿಸಿ ತಮ್ಮ ಅಧಿಕಾರಾವಧಿಯೊಳಗೆ ಪೂರ್ಣಗೊಳಿಸಿ. ಇದನ್ನು ತಮ್ಮ ರಾಜಕೀಯ ಲಾಭಯಕ್ಕಾಗಿ ಬಳಸಬೇಡಿ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಅವರು ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವರಾದ ಡಿ.ಕೆ. ಶಿವಕುಮಾರ್ ಅವರಿಗೆ ಬಹಿರಂಗ ಪತ್ರದ ಮೂಲಕ ಆಗ್ರಹಿಸಿದ್ದಾರೆ.

2018ರಲ್ಲಿಯೇ ಸರ್ವೋಚ್ಚ ನ್ಯಾಯಾಲಯವು ಮೇಕೆದಾಟು ಯೋಜನೆಗೆ ನೆರೆ ರಾಜ್ಯಗಳ ಸಮ್ಮತಿ ಕಡ್ಡಾಯವಲ್ಲ ಎಂದು ಹೇಳಿದೆ. ಆದರೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರಾಜಕೀಯ ಕಾರಣಗಳನ್ನು ನೀಡಿ ಯೋಜನೆಯನ್ನು ಉದ್ದೇಶಪೂರ್ವಕವಾಗಿ ವಿಳಂಬಗೊಳಿಸಿವೆ ಎಂದು ಅವರು ಆರೋಪಿಸಿದ್ದಾರೆ.

ತಮಿಳುನಾಡಿನ ರಾಜಕೀಯ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಬಿಜೆಪಿ ಸರ್ಕಾರ ಜಲಶಕ್ತಿ ಸಚಿವಾಲಯದ ಮೂಲಕ ಅನುಮತಿಗಳನ್ನು ಇಷ್ಟು ದಿವಸ ತಡೆ ಹಿಡಿದದ್ದು ತಪ್ಪು ಎಂದಿದ್ದಾರೆ. ಕೇಂದ್ರ ಸರ್ಕಾರವು ರಾಜ್ಯಸಭೆಯಲ್ಲಿ ನೆರೆಹೊರೆ ರಾಜ್ಯಗಳ ಸಮ್ಮತಿ ಬೇಕಿಲ್ಲ ಎಂಬುದಾಗಿ ಹೇಳಿದೆ.

2023ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಮೇಕೆದಾಟು ಯೋಜನೆಯ ಹೆಸರಿನಲ್ಲಿ ಜನರಿಗೆ ಭರವಸೆ ನೀಡಿ ಅಧಿಕಾರಕ್ಕೆ ಬಂದಿದ್ದರೂ, ಎರಡು ವರ್ಷಗಳ ಆಡಳಿತದಲ್ಲಿ ಯಾವುದೇ ಸ್ಪಷ್ಟ ಕ್ರಮ ಕೈಗೊಂಡಿಲ್ಲ , ರಾಜ್ಯದ ಹಿತಾಸಕ್ತಿಯ ವಿಚಾರದಲ್ಲಿ ಕೇಂದ್ರದ ಮುಂದೆ ಧ್ವನಿ ಎತ್ತಲು ವಿಫಲವಾಗಿರುವ ಕರ್ನಾಟಕದ ಬಿಜೆಪಿ ಸಂಸದರೂ ತಮ್ಮ ಜವಾಬ್ದಾರಿಯಿಂದ ವಿಮುಖರಾಗಿದ್ದಾರೆ ಎಂದು ಟೀಕಿಸಿದ್ದಾರೆ .

ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಜನರ ಕುಡಿಯುವ ನೀರಿನ ವಿಷಯವನ್ನು ರಾಜಕೀಯದ ವಿಷಯ ಮಾಡದೇ ಮೇಕೆದಾಟು ಯೋಜನೆಯನ್ನು ಜನರ ಬದುಕಿನ ಹಕ್ಕಿನ ಯೋಜನೆಯಾಗಿ ಪರಿಗಣಿಸಿ ಶೀಘ್ರಗತಿಯಲ್ಲಿ ಅನುಷ್ಠಾನಗೊಳಿಸಬೇಕೆಂದು ಡಾ. ಮುಖ್ಯಮಂತ್ರಿ ಚಂದ್ರು ಅವರು ಒತ್ತಾಯಿಸಿದ್ದಾರೆ.

विज्ञापन
AdSense · in-feed

संबंधित लेख