ಬೆಂಗಳೂರು: ಗೃಹ ಜ್ಯೋತಿ ಯೋಜನೆ ಫಲಾನುಭವಿಗಳ ಮನೆ-ಮನೆ ಮಾಹಿತಿ ಪರಿಶೀಲನೆಗೆ ಮೀಟರ್ ರೀಡರ್ ಗಳು ನಿಯೋಜನೆಗೊಂಡಿರುವ ಹಿನ್ನೆಲೆಯಲ್ಲಿ ಜುಲೈ ತಿಂಗಳಲ್ಲಿ ಗೃಹ ಬಳಕೆ ಗ್ರಾಹಕರಿಗೆ ಭೌತಿಕ ಬಿಲ್ ನೀಡುವುದಿಲ್ಲ ಎಂದು ಬೆಸ್ಕಾಂ ತಿಳಿಸಿದೆ.
ಜುಲೈ ತಿಂಗಳಲ್ಲಿ ಗ್ರಾಹಕರಿಗೆ ಭೌತಿಕ ಬಿಲ್ ನೀಡದೆ, ಕಳೆದ ಮೂರು ತಿಂಗಳ ಸರಾಸರಿ ವಿದ್ಯುತ್ ಬಳಕೆ ಆಧಾರದ ಮೇಲೆ ಸರಾಸರಿ ಬಿಲ್ ನೀಡಲಾಗಿದ್ದು, ಬಿಲ್ ಮೊತ್ತವನ್ನು ಎಸ್ಎಂಎಸ್ ಹಾಗೂ ಇಮೇಲ್ ಮೂಲಕ ಗ್ರಾಹಕರಿಗೆ ಕಳುಹಿಸಲಾಗಿದೆ.
ಆದರೆ ಎಚ್ ಟಿ ಗ್ರಾಹಕರು, 40 HP ಮತ್ತು ಅದಕ್ಕಿಂತ ಹೆಚ್ಚಿನ ಮಂಜೂರಾದ ಲೋಡ್ ಹೊಂದಿರುವ ಲೋ ಟೆನ್ಷನ್ (LT) ಗ್ರಾಹಕರು, ಸೋಲಾರ್ ರೂಫ್ಟಾಪ್ (SRTPV) ಗ್ರಾಹಕರು ಹಾಗೂ ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದಿರುವ ಗ್ರಾಹಕರಿಗೆ ನೈಜ ಮೀಟರ್ ರೀಡಿಂಗ್ ಆಧಾರದ ಮೇಲೆ ಬಿಲ್ ನೀಡಲಾಗುವುದು.