ಸ್ವಂತ ಉದ್ಯಮ ಆರಂಭಿಸಲು : ಒಂದು ದಿನದ ಉದ್ಯಮಶೀಲತಾ ಜಾಗೃತಿ ಶಿಬಿರ

1 ನಿಮಿಷ ಓದು · ನವೀಕರಿಸಲಾಗಿದೆ 4 ವೀಕ್ಷಣೆ
WhatsApp

ಬೆಂಗಳೂರು ನಗರ ಜಿಲ್ಲೆ, ಜುಲೈ 31 (ಕರ್ನಾಟಕ ವಾರ್ತೆ) : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ಧಾರವಾಡ ಇವರ ಸಂಯುಕ್ತ ಆಶ್ರಯದಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗಾಗಿ ಉಚಿತ ಒಂದು ದಿನದ ಉದ್ಯಮಶೀಲತಾ ಜಾಗೃತಿ ಶಿಬಿರವನ್ನು ಆಯೋಜಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು 2026ರ ಆಗಸ್ಟ್ 3 ರೊಳಗೆ ಸಿಡಾಕ್, ರಾಜಾಜಿನಗರ, ವೆಸ್ಟ್ ಆಫ್ ಕಾರ್ಡ್ ರಸ್ತೆ, ಕೈಗಾರಿಕಾ ಪ್ರದೇಶ, ಬೆಂಗಳೂರು-560010 ಕಚೇರಿಯಲ್ಲಿ ಕಚೇರಿ ವೇಳೆಯಲ್ಲಿ ಹೆಸರು ನೋಂದಾಯಿಸಿಕೊಳ್ಳಬಹುದು ಅಥವಾ ದೂರವಾಣಿ ಮೂಲಕವೂ ನೋಂದಣಿ ಮಾಡಿಸಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9008175702, 9448413948 ಅಥವಾ 9986332736 ಸಂಪರ್ಕಿಸಬಹುದು ಎಂದು ಸಿಡಾಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
AdSense · in-feed

ಸಂಬಂಧಿತ ಲೇಖನಗಳು